ನಗರಾಭಿವೃದ್ದಿ ಇಲಾಖೆ ನೇಮಕಾತಿ 2024 – DULT Karnataka Recruitment 2024

DULT Karnataka Recruitment 2024 : ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕಾಗಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DULT Karnataka Recruitment 2024 : Details of Vacancies

ಹುದ್ದೆ : ನಗರ ಸಾರಿಗೆ ವಿಶೇಷಜ್ಞರು, ಅಭಿಯಂತರರು-ಸಿವಿಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ನಗರ ಸಾರಿಗೆ ವಿಶೇಷಜ್ಞರು1
ಅಭಿಯಂತರರು-ಸಿವಿಲ್1

ಶೈಕ್ಷಣಿಕ ಅರ್ಹತೆ :
ನಗರ ಸಾರಿಗೆ ವಿಶೇಷಜ್ಞರು – ಸಾರಿಗೆ ಯೋಜನೆ ಹಾಗೂ ಸಾರಿಗೆ ಇಂಜಿನಿಯರಿಂಗ್ ವಿಷಯಗಳಲ್ಲಿ ಮಾಸ್ಟರ್ಸ್ ಪದವಿ ಅಥವಾ ತತ್ಸಮಾನ ಅಥವಾ ಹೆಚ್ಚಿನ ಪದವಿ ಹೊಂದಿರತಕ್ಕದ್ದು.

ಅಭಿಯಂತರರು-ಸಿವಿಲ್ – ಸಿವಿಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅನುಭವ :
ನಗರ ಸಾರಿಗೆ ವಿಶೇಷಜ್ಞರು – ನಗರ ಸಾರಿಗೆ ವ್ಯವಸ್ಥೆಯ ಯೋಜನೆ ಸಂಶೋಧನೆಯಲ್ಲಿ ಅನುಷ್ಠಾನ/ ವಿನ್ಯಾಸ ವಿಷಯದಲ್ಲಿ 10 ಕ್ಕಿಂತ ಹೆಚ್ಚು ವರ್ಷಗಳ ಸಂಬಂಧಿತ ಪೂರ್ಣಾವಧಿಯ ಕೆಲಸದ ಅನುಭವ ಹೊಂದಿರಬೇಕು.

ಅಭಿಯಂತರರು-ಸಿವಿಲ್ – ನಗರ ರಸ್ತೆಗಳು ಮತ್ತು ಸಿವಿಲ್ ಇಂಜಿನಿಯರಿಂಗ್ ಯೋಜನೆಗಳ ವಿಷಯದಲ್ಲಿ ಕಾರ್ಯಪಾಲಕ ಅಭಿಯಂತರರ ದರ್ಜೆಗೆ ಸಮಾನದ ಸೇವೆಯಲ್ಲಿ ಕನಿಷ್ಠ 15 ವರ್ಷಗಳ ಅನುಭವ ಹೊಂದಿರತಕ್ಕದ್ದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 06, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 20, 2024

DULT Karnataka Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment