DWCD Kalaburagi Recruitment 2024 : ಕಲಬುರಗಿ ಜಿಲ್ಲೆಯಲ್ಲಿ ಮಿಷನ್ ಶಕ್ತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DWCD Kalaburagi Recruitment 2024 : Details of Vacancies
ಹುದ್ದೆ : ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್ | 1 |
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ | 1 |
ಶೈಕ್ಷಣಿಕ ಅರ್ಹತೆ :
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್ – ಸೋಷಿಯಲ್/ ಲೈಪ್ ಸೈನ್ಸ್/ ನ್ಯೂಟ್ರಿಷನ್/ ಮೆಡಿಸಿನ್/ ಹೆಲ್ತ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್/ ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು.
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – ಎಕನಾಮಿಕ್ಸ್/ ಬ್ಯಾಂಕಿಂಗ್/ ಇತರ ವಿಭಾಗಗಳಲ್ಲಿ ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ನೇಮಕಾತಿ 2024
ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯ್ತಿಯಲ್ಲಿ ತಾಂತ್ರಿಕ ಸಹಾಯಕ ಹಾಗೂ ಡಿಇಓ ಹುದ್ದೆಗಳ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೈಲ್ವೆ ಸ್ಟೇಷನ್, ಐಬಿ ರಸ್ತೆ, ಗುರುಕುಲ ಕಾಲೇಜು ಹತ್ತಿರ, ಧಡೆದ್ ಹೆರಿಗೆ ಆಸ್ಪತ್ರೆ ಆವರಣ, ಕಲಬುರಗಿ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 05, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 14, 2024
DWCD Kalaburagi Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಸಲ್ಲಿಸಬೇಕಾದ ದಾಖಲೆಗಳು :
• ನಿಗದಿತ ನಮೂನೆಯಲ್ಲಿ ಅರ್ಜಿ
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
• ಹುದ್ದೆಗೆ ನಿಗದಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕನಿಷ್ಠ 06 ತಿಂಗಳು ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.