
DWCD Yadgiri Recruitment 2026 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟಂಟ್, ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅನುಭವ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DWCD Yadgiri Recruitment 2026 : Details of Vacancies
ಹುದ್ದೆ :
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟಂಟ್, ಬ್ಲಾಕ್ ಕೋಆರ್ಡಿನೇಟರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟಂಟ್ | 1 |
| ಬ್ಲಾಕ್ ಕೋಆರ್ಡಿನೇಟರ್ | 2 |
ಶೈಕ್ಷಣಿಕ ಅರ್ಹತೆ :
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟಂಟ್ –
ಗ್ರಾಜುಯೇಟ್ ಡಿಗ್ರಿ/ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್/ ಸೋಷಿಯಲ್ ಸೈನ್ಸ್/ ನ್ಯೂಟ್ರಿಷನ್.
ಬ್ಲಾಕ್ ಕೋಆರ್ಡಿನೇಟರ್ –
ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ರೈಲ್ವೆಯಲ್ಲಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (ದಿನಾಂಕ 25/08/2026ಕ್ಕೆ) :
- ಕನಿಷ್ಠ 21 ವರ್ಷ ಪೂರೈಸಿರಬೇಕು
- ಗರಿಷ್ಠ 45 ವರ್ಷ ಮೀರಿರಬಾರದು
ವೇತನ :
| ಹುದ್ದೆ | ವೇತನ |
| ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟಂಟ್ | ರೂ. 18,000/- |
| ಬ್ಲಾಕ್ ಕೋಆರ್ಡಿನೇಟರ್ | ರೂ. 20,000/- |
ಅನುಭವ :
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ :
ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.
ಸಲ್ಲಿಸಬೇಕಾದ ದಾಖಲೆಗಳು :
- ನಿಗದಿತ ನಮೂನೆಯಲ್ಲಿ ಅರ್ಜಿ.
- ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
- ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
- ಅನುಭವ ಪ್ರಮಾಣ ಪತ್ರಗಳು.
- ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
- ತಹಸಿಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.
ಅರ್ಜಿ ಸಲ್ಲಿಸುವ ವಿಳಾಸ :
ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 07, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 25, 2026
DWCD Yadgiri Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.