Eastern Railway Recruitment 2022 – Apply Online for 3115 Apprentice Posts

Eastern Railway Recruitment 2022 : ಪೂರ್ವ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Eastern Railway Recruitment 2022 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3115 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಾನ : ದಿನಾಂಕ 29 ಅಕ್ಟೋಬರ್ 2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ಪೂರ್ವ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ವೆಲ್ಡರ್, ಫಿಟ್ಟರ್, ಇಲೆಕ್ಟ್ರಿಕಲ್, ಪೇಂಟರ್, ಕಾರ್ಪೆಂಟರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ವೈಯರ್‌ಮನ್, ಮೆಕ್ಯಾನಿಕಲ್, ರೆಫ್ರಿಜೆರೇಷನ್‌ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಪೂರ್ವ ರೈಲ್ವೆಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪೂರ್ವ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 30, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 29, 2022

Eastern Railway Recruitment 2022 : Important Links

Notification Click Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment