ECIL Junior Technician Recruitment 2024 : ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ಅಗತ್ಯ ಇರುವ ಜೂನಿಯರ್ ಟೆಕ್ನೀಷಿಯನ್ ಗ್ರೇಡ್ 2 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ECIL Junior Technician Recruitment 2024 : Details of Vacancies
ಹುದ್ದೆ : ಜೂನಿಯರ್ ಟೆಕ್ನೀಷಿಯನ್ ಗ್ರೇಡ್ 2
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1100 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಟ್ರೇಡ್ | ಹುದ್ದೆಗಳ ಸಂಖ್ಯೆ |
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ | 275 |
ಎಲೆಕ್ಟ್ರಿಷಿಯನ್ | 275 |
ಫಿಟ್ಟರ್ | 550 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್/ಎಲೆಕ್ಟ್ರಿಷಿಯನ್/ಫಿಟ್ಟರ್ ಟ್ರೇಡ್‌ಗಳಲ್ಲಿ ITI (2 ವರ್ಷಗಳು) ಉತ್ತೀರ್ಣರಾಗಿರಬೇಕು ಜೊತೆಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿ ಹೊಂದಿರಬೇಕು.
ವಯೋಮಿತಿ : ದಿನಾಂಕ 16 ಜನವರಿ 2024ಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಉದ್ಯೋಗ ಮಾಹಿತಿ : ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2024
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,528 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 10, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 16, 2024
ECIL Junior Technician Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.