ಹಾಸ್ಟೇಲ್ ವಾರ್ಡನ್ ಹುದ್ದೆಗಳ ನೇಮಕಾತಿ 2023 – EMRS Hostel Warden Recruitment 2023

EMRS Hostel Warden Recruitment 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

EMRS Hostel Warden Recruitment 2023 : Details of Vacancies

ಹುದ್ದೆ : ಹಾಸ್ಟೇಲ್ ವಾರ್ಡನ್ (ಪುರುಷ ಮತ್ತು ಮಹಿಳೆ)

ಕರ್ತವ್ಯ ಸ್ಥಳ : ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 669 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಹಾಸ್ಟೇಲ್ ವಾರ್ಡನ್ (ಪುರುಷ)335
ಹಾಸ್ಟೇಲ್ ವಾರ್ಡನ್ (ಮಹಿಳೆ)334

ಶೈಕ್ಷಣಿಕ ಅರ್ಹತೆಗಳು : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 ರಿಂದ ರೂ. 92,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ PGT, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ

ವಯೋಮಾನ : ಅಭ್ಯರ್ಥಿಗಳು ಗರಿಷ್ಠ 35 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ (ಓ.ಎಮ್.ಆರ್ ಆಧಾರಿತ ಪರೀಕ್ಷೆ) ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಕರ್ನಾಟಕದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ)

ಪರೀಕ್ಷಾ ಮಾದರಿ :

ಹಾಸ್ಟೇಲ್ ವಾರ್ಡನ್ ಹುದ್ದೆಗಳ ನೇಮಕಾತಿ 2023 – EMRS Hostel Warden Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 1,000 ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 18, 2023 ಅಕ್ಟೋಬರ್ 19, 2023

EMRS Hostel Warden Recruitment 2023 : Important Links

EXTENDED NOTIFICATION CLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment