ESIC Recruitment 2022 – Apply Online for 3293 UDC, Stenographer, MTS Posts

ESIC Recruitment 2022 : ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮವು ಭಾರತದಾದ್ಯಂತ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಪ್ರತಿ ರಾಜ್ಯದ ಹುದ್ದೆಗಳ ಭರ್ತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯದ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ESIC Recruitment 2022 : Details of Vacancies

ಹುದ್ದೆ : ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3293 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 282 ಹುದ್ದೆಗಳು ಖಾಲಿ ಇದೆ.

ಹುದ್ದೆಹುದ್ದೆಗಳ ಸಂಖ್ಯೆವಯೋಮಾನ
ಅಪ್ಪರ್ ಡಿವಿಷನ್ ಕ್ಲರ್ಕ್19918-27 ವರ್ಷ
ಸ್ಟೆನೋಗ್ರಾಫರ್1818-27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್6518-25 ವರ್ಷ

ಶೈಕ್ಷಣಿಕ ಅರ್ಹತೆ :
ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು.
ಸ್ಟೆನೋಗ್ರಾಫರ್ ಹುದ್ದೆಗೆ ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ : ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗೆ ಮಾಸಿಕ ರೂ. 25,500 ರಿಂದ 81,100 ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಮಾಸಿಕ ರೂ. 18,000 ರಿಂದ 56,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಕಂಪ್ಯೂಟರ್ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : 3000 ಸರ್ವೇಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಅಭ್ಯರ್ಥಿಗಳು ರೂ. 250
• ಉಳಿದ ಅಭ್ಯರ್ಥಿಗಳು ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2022

ESIC Recruitment 2022 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
(ಜನವರಿ 15 ರಿಂದ ಅರ್ಜಿ ಸಲ್ಲಿಕೆ ಆರಂಭ)

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment