
Gadag District PK Recruitment 2026 : ಗದಗ ಜಿಲ್ಲೆಯ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Gadag District PK Recruitment 2026 : Details of Vacancies
ಹುದ್ದೆ :
ಪೌರಕಾರ್ಮಿಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 154 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು :
- ಈ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
- ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು.
- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಹಿಂದೆ ಹೊರಗುತ್ತಿಗೆ ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್, ಯು.ಜಿ.ಡಿ/ ಹೆಲ್ಫರ್ಸ್ ಕ್ಲೀನರ್ಸ್ ಹಾಗೂ ಹೆಲ್ಫರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ/ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಉದ್ಯೋಗ ಮಾಹಿತಿ : ಕೆಇಎಯಿಂದ ಪೌರಾಡಳಿತ ನಿರ್ದೇಶನಾಲಯದ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರು ಸರಬರಾಜು ಆಪರೇಟರ್ ಹಾಗೂ ಇಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿ 2026
ವಯೋಮಾನ :
- ಕನಿಷ್ಠ 18 ವರ್ಷ
- ಗರಿಷ್ಠ 50 ವರ್ಷ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಗೆ ಭೇಟಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಪಡೆಯುವ ವಿಳಾಸ :
ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಠಡಿ ಸಂ. 123, ಗದಗ ಹಾಗೂ ನಗರಸಭೆ ಗದಗ ಬೆಟಗೇರಿ
ಅರ್ಜಿ ಶುಲ್ಕ :
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳು – ರೂ. 100
- ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು – ರೂ. 200
ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು ಡಿ.ಡಿ. ಮೂಲಕ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು (ಡಿಡಿ ಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಗದಗ ಹೆಸರಿಗೆ ತೆಗೆಯುವುದು)
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 29, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2026
Gadag District Poura Karmika Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.