Gadag Zilla Panchayat Recruitment 2021 : ಸ್ಪೆಷಲಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Gadag Zilla Panchayat Recruitment 2021 : ಗದಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gadag Zilla Panchayat Recruitment 2021 : Details of Vacancies

ಹುದ್ದೆ : ರೀಜನಲ್ ಪ್ಲಾನಿಂಗ್ ಸ್ಪೆಷಲಿಸ್ಟ್, ರೂರಲ್ ಡೆವಲಪ್ಮೆಂಟ್ ಅಂಡ್ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್, ಎಂಜಿನಿಯರಿಂಗ್ ಸ್ಪೆಷಲಿಸ್ಟ್, ಸ್ಪೆಷಿಯಲ್ ಪ್ಲಾನಿಂಗ್ ಪ್ರೊಫೆಷನಲ್, ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಅಥವಾ ಯಾವುದೇ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪದವಿ ಹೊಂದಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಅಗತ್ಯ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ~ ರೂ. 30,000 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.

ಉದ್ಯೋಗ ಮಾಹಿತಿ : Bharatiya Pashupalan Nigam Recruitment 2021 : 4960 ಡೈರಿ ಸಂಯೋಜಕ ಹಾಗೂ ವಿವಿಧ ಹುದ್ದೆಗಳ ಭರ್ತಿ

ಗದಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಯ ಇ ಮೇಲ್ ವಿಳಾಸಕ್ಕೆ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳ ಮಾಹಿತಿಯನ್ನು ತುಂಬಿ ಕಛೇರಿಯ ಇ_ಮೇಲ್ಗೆ ಕಳುಹಿಸಬೇಕು ಅಥವಾ ಹಾರ್ಡ್ ಪ್ರತಿಗಳನ್ನು ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದು

ಅರ್ಜಿ ಸಲ್ಲಿಸುವ ವಿಳಾಸ : ಇ_ಮೇಲ್ zpgdgrurban@gmail.com
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಗದಗ (ಡಿ.ಆರ್.ಡಿ.ಎ ಶಾಖೆ)
ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ 582101

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 30, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 07, 2021

Gadag Zilla Panchayat Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 9164505757, 8970165300

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.