Gadag Zilla Panchayat Recruitment 2022 – Apply Online for 12 DEO, Technical Assistant Posts

Gadag Zilla Panchayat Recruitment 2022 : ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಸಂಪನ್ಮೂಲ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gadag Zilla Panchayat Recruitment 2022 : Details of Vacancies

ಹುದ್ದೆ :
1) DEO cum Co-Ordinator
ಶೈಕ್ಷಣಿಕ ಅರ್ಹತೆ – ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

2) ತಾಲೂಕ ಐ.ಇ.ಸಿ. ಸಂಯೋಜಕರು
ಶೈಕ್ಷಣಿಕ ಅರ್ಹತೆ – ಸ್ನಾತಕೋತ್ತರ ಪದವಿ (Mass Communication) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

3) ತಾಂತ್ರಿಕ ಸಹಾಯಕರು (ರೇಷ್ಮೆ)
ಶೈಕ್ಷಣಿಕ ಅರ್ಹತೆ – ಬಿ.ಎಸ್ಸಿ (Sericulture) / ಎಂ.ಎಸ್ಸಿ (Sericulture) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಸಂಪನ್ಮೂಲ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ತಾಲೂಕ ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು (ರೇಷ್ಮೆ) ಹುದ್ದೆಗೆ 36 ತಿಂಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ

ಗದಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 05, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 12, 2022

Gadag Zilla Panchayat Recruitment 2022 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment