Gadag Zilla Panchayat Recruitment 2022 : ಗದಗ ಜಿಲ್ಲಾ ಪಂಚಾಯತನಲ್ಲಿ ಇ-ಪಂಚಾಯತ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Gadag Zilla Panchayat Recruitment 2022 : Details of Vacancies
ಹುದ್ದೆ : ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು (ADPM)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ ಒಂದು ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಇ(ಸಿಎಸ್, ಇ&ಸಿ, ಐಎಸ್)/ಎಂಸಿಎ/ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅನುಭವ : ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 03 ವರ್ಷ ಅನುಭವ ಹೊಂದಿರಬೇಕು.
ಗದಗ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 08, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 16, 2022
Gadag Zilla Panchayat Recruitment 2022 : Important Links
Notification | Click Here |
Apply Online | Click Here |
ಹೆಚ್ಚಿನ ಮಾಹಿತಿಗೆ ಕೆಲಸದ ವೇಳೆಯಲ್ಲಿ ಜಿ.ಪಂ ಗದಗ, ಕಛೇರಿ ನರೇಗಾ ಶಾಖೆಯನ್ನು ಸಂಪರ್ಕಿಸಿ. (ದೂರವಾಣಿ ಸಂಖ್ಯೆ : 08372-235947)
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.