Gadag Zilla Panchayat Recruitment 2024 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Gadag Zilla Panchayat Recruitment 2024 : Details of Vacancies
ಹುದ್ದೆ : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಕೃಷಿ) | 6 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 5 |
ತಾಂತ್ರಿಕ ಸಹಾಯಕರು (ಅರಣ್ಯ) | 5 |
ಶೈಕ್ಷಣಿಕ ಅರ್ಹತೆ :
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2024
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಮಾಸಿಕ ಸಂಭಾವನೆ : ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ನೀಡಲಾಗುತ್ತದೆ. ಪ್ರಯಾಣ ಭತ್ಯೆ ಗರಿಷ್ಠ ರೂ. 2,000 ನೀಡಲಾಗುತ್ತದೆ.
ಇತರೆ ಮಾಹಿತಿ : ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಮತ್ತು ಇಂಗ್ಲೀಷ್ ಭಾಷೆ ತಿಳಿದಿರಬೇಕು.
ಉದ್ಯೋಗ ಮಾಹಿತಿ : ಗದಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 20, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 31, 2024
ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ದಿನಾಂಕ : ಸೆಪ್ಟೆಂಬರ್ 05, 2024
ಮೆರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ದಿನಾಂಕ : ಸೆಪ್ಟೆಂಬರ್ 10, 2024
ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ : ಸೆಪ್ಟೆಂಬರ್ 13, 2024
Gadag Zilla Panchayat Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.