Government Employees Cooperative Bank Recruitment 2022 – Apply for 09 Junior Assistant Posts

Government Employees Cooperative Bank Recruitment 2022 : ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Government Employees Cooperative Bank Recruitment 2022 : Details of Vacancies

ಹುದ್ದೆ : ಕಿರಿಯ ಸಹಾಯಕರು/ ಬೆರಳಚ್ಚುಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯದ ಪದವಿಯಲ್ಲಿ ಎಲ್ಲಾ ವರ್ಷ/ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಬಿ.ಕಾಂ/ ಸಹಕಾರ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನಲ್ಲಿ ನೇಮಕಾತಿ 2022

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ಮಹಾವೀರ ರೋಡ, ವಿಜಯಪುರ – 586101

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 1,000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 25, 2022

Government Employees Cooperative Bank Recruitment 2022 : Important Links

ಪ್ರಕಟಣೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment