ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ವಿಜಯಪುರ ನೇಮಕಾತಿ 2023 – Government Employees Cooperative Bank Vijayapura Recruitment 2023

Government Employees Cooperative Bank Vijayapura Recruitment 2023 : ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಕಿರಿಯ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Government Employees Cooperative Bank Vijayapura Recruitment 2023 : Details of Vacancies

ಹುದ್ದೆ : ಕಿರಿಯ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಧಿಕೃತ ವಿಶ್ವವಿದ್ಯಾಲಯದ ಪದವಿಯಲ್ಲಿ ಎಲ್ಲಾ ವರ್ಷ/ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎಯಿಂದ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ನಿಗದಿತ ಶುಲ್ಕ ಪಾವತಿಸಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು, ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ಮಹಾವೀರ ರೋಡ, ವಿಜಯಪುರ – 586101

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 1,000
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು – ರೂ. 500

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 30, 2023

Government Employees Cooperative Bank Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment