GPSTR Recruitment 2022 Notification – Apply Online for 15000 Teachers Posts

GPSTR Recruitment 2022 Notification : ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 15000 ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

GPSTR Recruitment 2022 Notification : Details of Vacancies

ಹುದ್ದೆ : ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8ನೇ ತರಗತಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ15000
ಹೈ. ಕ. ವೃಂದ5000

ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8) ವೃಂದದ ಹುದ್ದೆಗಳಿಗೆ ಸಂಬಂಧಿಸಿದಂತೆ ನಿಗದಿಪಡಿಸಿರುವ ಅರ್ಹತೆಗಳು :
1) ಪದವಿಯಲ್ಲಿ ಒಟ್ಟಾರೆಯಾಗಿ ಕನಿಷ್ಠ (ಸರಾಸರಿ) ಶೇ. 50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಅಥವಾ ಡಿಪ್ಲೋಮಾದಲ್ಲಿ ವಿಶೇಷ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ಪದವಿಯಲ್ಲಿ ಒಟ್ಟಾರೆಯಾಗಿ ಕನಿಷ್ಠ (ಸರಾಸರಿ) ಶೇ. 50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ ಶಿಕ್ಷಣ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ಒಟ್ಟಾರೆಯಾಗಿ ಕನಿಷ್ಠ (ಸರಾಸರಿ) ಶೇ. 50 ಅಂಕಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಹಾಗೂ 4 ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷಯದಲ್ಲಿ ಪದವಿ ಅಥವಾ 4 ವರ್ಷಗಳ ಶಿಕ್ಷಣ ವಿಷಯದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗಗಳ ಪೈಕಿ ಪ್ರವರ್ಗ 1 ಅಥವಾ ಅಂಗವಿಕಲ ಅಭ್ಯರ್ಥಿಗಳ ನೇಮಕಾತಿಗಾಗಿ ಅಂಕಗಳನ್ನು ಪದವಿ ಅಥವಾ ಪದವಿಪೂರ್ವ ಶಿಕ್ಷಣದಲ್ಲಿ ಕನಿಷ್ಠ (ಸರಾಸರಿ) ಶೇ. 45 ರಷ್ಟು ನಿಗದಿಪಡಿಸಲಾಗಿದೆ.
ಮತ್ತು
2) ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ-2 ರಲ್ಲಿ ಅರ್ಹತೆಗಳಿಸಿರಬೇಕು.
ಮತ್ತು
3) ರಾಷ್ಟ್ರೀಯ ಶಿಕ್ಷಕ ಶಿಕ್ಷಣ ಪರಿಷತ್ತಿನ (National Council for Teacher Education) ವ್ಯಾಪ್ತಿಯ ನಿಯಮಗಳಿಂದ ಕಾಲ ಕಾಲಕ್ಕೆ ಸೂಚಿಸಲಾದ ಯಾವುದೇ ಹೆಚ್ಚಿನ ಅಥವಾ ಹೆಚ್ಚುವರಿ ವಿದ್ಯಾರ್ಹತೆ
4) ವಿದ್ಯಾರ್ಹತೆ : ಪ್ರತಿ ವಿಷಯ ಹಾಗೂ ಮಾದ್ಯಮದ ಹುದ್ದೆಗೆ ಸಂಬಂಧಿಸಿದಂತೆ ನಿಗದಿಪಡಿಸಿರುವ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 – ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆಯ್ಕೆ ಪ್ರಾಧಿಕಾರವು ನೇಮಕಾತಿಗೆ ವಿಷಯವಾರು ಮತ್ತು ಮಾಧ್ಯಮವಾರು ಹಾಗೂ ಪ್ರವರ್ಗವಾರು ಅಧಿಸೂಚಿಸಿದ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ, ಪದವಿ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣ ಕೋರ್ಸನಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ವೇಯಿಟೇಜ್ (Weightage) ಉಪಯೋಗಿಸಿ, ಲೆಕ್ಕಹಾಕಿ Derived Percentageನ ಆಧಾರದ ಮೇಲೆ ಪ್ರತ್ಯೇಕವಾಗಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2022

ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ,
ಪ.ಜಾತಿ, ಪ.ವರ್ಗ, ಪ್ರ1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 625
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. 1250
• ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ,
ಪ.ಜಾತಿ, ಪ.ವರ್ಗ, ಪ್ರ1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 1250
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. 2500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಮಾತ್ರ ಚಲನ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 23, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022
ಪರೀಕ್ಷೆ ನಡೆಸುವ ದಿನಾಂಕ : ಮೇ 21, ಮೇ 22, 2022

GPSTR Recruitment 2022 Notification : Important Links

ಜಿಲ್ಲೆಅಧಿಸೂಚನೆ
ದಕ್ಷಿಣ ಕನ್ನಡClick Here
ಚಿಕ್ಕೋಡಿClick Here
ಬಾಗಲಕೋಟClick Here
ಬಳ್ಳಾರಿClick Here
ಬೆಳಗಾವಿClick Here
ಚಾಮರಾಜನಗರClick Here
ಉತ್ತರ ಕನ್ನಡ – ಕಾರವಾರClick Here
ಮಂಡ್ಯClick Here
ಮೈಸೂರುClick Here
ರಾಮನಗರClick Here
ಉಡುಪಿClick Here
ವಿಜಯನಗರ – ಹೊಸಪೇಟೆClick Here
ಕಲಬುರಗಿClick Here
ತುಮಕೂರುClick Here
ರಾಯಚೂರುClick Here
ಯಾದಗಿರಿClick Here
ಗದಗClick Here
ಬೆಂಗಳೂರು ಗ್ರಾಮಾಂತರClick Here
ಬೆಂಗಳೂರು ದಕ್ಷಿಣClick Here
ಚಿಕ್ಕಬಳ್ಳಾಪುರClick Here
ಚಿಕ್ಕಮಗಳೂರುClick Here
ಚಿತ್ರದುರ್ಗClick Here
ದಾವಣಗೇರೆClick Here
ಧಾರವಾಡClick Here
ಹಾಸನClick Here
ಕೊಡಗುClick Here
ಕೋಲಾರClick Here
ಕೊಪ್ಪಳClick Here
ಶಿವಮೊಗ್ಗClick Here
ಹಾವೇರಿClick Here
ಬೆಂಗಳೂರು ಉತ್ತರClick Here
ಬೀದರClick Here
ವಿಜಯನಗರClick Here
Apply OnlineClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment