Gram Panchayat Gram Kayak Mitra Recruitment 2022 – Apply Now Various Post

Gram Panchayat Gram Kayak Mitra Recruitment 2022 : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಒಟ್ಟು 10 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gram Panchayat Gram Kayak Mitra Recruitment 2022 : Details of Vacancies

ಹುದ್ದೆ : ಗ್ರಾಮ ಕಾಯಕ ಮಿತ್ರ (ಮಹಿಳೆ)

ಕರ್ತವ್ಯ ಸ್ಥಳ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಗ್ರಹಾರ, ತಾರಾನಗರ, ಬಂಡ್ರಿ, ತಾಳೂರು, ಸೋವೇನಹಳ್ಳಿ, ಅಂತಾಪುರ, ಭುಜಂಗನಗರ, ಹೆಚ್.ಕೆ.ಹಳ್ಳಿ, ಮೆಟ್ರಿಕಿ, ದರೋಜಿ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಒಟ್ಟು 10 ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಓದು, ಬರಹ ಚೆನ್ನಾಗಿ ತಿಳಿದಿರಬೇಕು.

ವಯೋಮಾನ : ದಿನಾಂಕ 01/01/2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ. 5000 ಪ್ರೋತ್ಸಾಹಧನ ನೀಡಲಾಗುತ್ತದೆ.

ಆಯ್ಕೆ ವಿಧಾನ : 10ನೇ ತರಗತಿಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳಲ್ಲಿ ಶೇ. 50ರಷ್ಟನ್ನು ಪರಿಗಣಿಸುವುದು. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಅಕುಶಲ ಕೂಲಿ ನಿರ್ವಹಿಸಿದ ಸರಾಸರಿ ಮಾನವದಿನಗಳಿಗೆ 20 ಅಂಕಗಳನ್ನು ನೀಡಲಾಗುವುದು. ಅಭ್ಯರ್ಥಿಯು ಯೋಜನೆಯಡಿ ಕಾಯಕ ಬಂಧುವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಪ್ರತಿ ವರ್ಷ ಅನುಭವಕ್ಕೆ ತಲಾ 05 ಅಂಕಗಳಂತೆ ಗರಿಷ್ಠ 20 ಅಂಕಗಳು. ಅಭ್ಯರ್ಥಿಗಳು ಪ.ಜಾತಿ, ಪ.ಪಂಗಡಕ್ಕೆ ಸೇರಿದ್ದಲ್ಲಿ 10 ಅಂಕಗಳು.

ಉದ್ಯೋಗ ಮಾಹಿತಿ : ಅಂಚೆ ಇಲಾಖೆ ನೇರ ನೇಮಕಾತಿ 2022

ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿಯನ್ನು ನೇರವಾಗಿ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 27, 2022

Gram Panchayat Gram Kayak Mitra Recruitment 2022 : Important Links

ಪ್ರಕಟಣೆ Click Here

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment