Gram Panchayat Library Supervisor Recruitment 2021 – Apply Now

Gram Panchayat Library Supervisor Recruitment 2021 : ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gram Panchayat Library Supervisor Recruitment 2021 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. (ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು)

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಗೌರವಧನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ

ಅರ್ಜಿ ಸಲ್ಲಿಸುವ ವಿಳಾಸ : ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಪಿಡಿಓ/ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಈ ಮೇಲ್ವಿಚಾರಕರ ಹುದ್ದೆಯು ಪರಿಶಿಷ್ಟ ಜಾತಿ (ಗ್ರಾಮೀಣ) ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಈ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿರಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 19, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 10, 2021

Gram Panchayat Library Supervisor Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Gram Panchayat Library Supervisor Recruitment 2021 – Apply Now”

Leave a Comment