Gramin Pashupalan Nigam Limited Recruitment 2021

Gramin Pashupalan Nigam Limited Recruitment 2021 : ಗ್ರಾಮೀಣ ಪಶುಸಂಗೋಪನಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gramin Pashupalan Nigam Limited Recruitment 2021 : Details of Vacancies

ಹುದ್ದೆ : ಪಶು ಸಂಗೋಪನಾ ಕಾರ್ಯಕರ್ತ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಪಶು ಸಂಗೋಪನಾ ಕಾರ್ಯಕರ್ತರ ಆಯ್ಕೆಯನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಾಡಲಾಗುವುದು. ಒಂದು ಗ್ರಾಮ ಪಂಚಾಯಿತಿಯಿಂದ ಒಂದು ಪಶು ಸಂಗೋಪನೆ ಕಾರ್ಯಕರ್ತನನ್ನು ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ವೇತನ ನೀಡಲಾಗುತ್ತದೆ

ಗ್ರಾಮೀಣ ಪಶುಸಂಗೋಪನಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 625 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 20, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 25, 2021

Gramin Pashupalan Nigam Limited Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.