GRKS Recruitment 2021 : 37 ಕಂಪ್ಯೂಟರ್ ಆಪರೇಟರ್, ಸರ್ವೇಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

GRKS Recruitment 2021 : ಗ್ರಾಮೀಣ ರೋಜಗಾರ್‌ ಕಲ್ಯಾಣ ಸಂಸ್ಥಾನದಲ್ಲಿ ಖಾಲಿಯಿರುವ ಸರ್ವೇಯರ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

GRKS Recruitment 2021 : Details of Vacancies

ಹುದ್ದೆ : ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್, ಬ್ಲಾಕ್ ಕೋ-ಆರ್ಡಿನೇಟರ್, ಕಂಪ್ಯೂಟರ್ ಆಪರೇಟರ್, ಬ್ಲಾಕ್ ಸರ್ವೇಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 37 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್31ರೂ. 16,500-19,500
ಬ್ಲಾಕ್ ಕೋ-ಆರ್ಡಿನೇಟರ್01ರೂ. 15,000-17,500
ಕಂಪ್ಯೂಟರ್ ಆಪರೇಟರ್01ರೂ. 13,500-15,500
ಬ್ಲಾಕ್ ಸರ್ವೇಯರ್04ರೂ. 12,000-14,500

ಶೈಕ್ಷಣಿಕ ಅರ್ಹತೆ : ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಹಾಗೂ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗೆ ಪದವಿ, ಕಂಪ್ಯೂಟರ್ ಆಪರೇಟರ್ ಹುದ್ದೆಗೆ ದ್ವಿತೀಯ ಪಿಯುಸಿ ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಬ್ಲಾಕ್ ಸರ್ವೇಯರ್ ಹುದ್ದೆಗೆ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 37 ವರ್ಷ ವಯೋಮಾನ ಹೊಂದಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಗ್ರಾಮೀಣ ರೋಜಗಾರ್‌ ಕಲ್ಯಾಣ ಸಂಸ್ಥಾನದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ. 170 ಹಾಗೂ ಉಳಿದ ಅಭ್ಯರ್ಥಿಗಳು ರೂ. 320 ಅರ್ಜಿ ಶುಲ್ಕ ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 26, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 28, 2021 ಜುಲೈ 15, 2021

GRKS Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook