GTTC Recruitment 2022 – Apply Now 03 Principal Posts

GTTC Recruitment 2022 : ಜಿಟಿಟಿಸಿಯು ತನ್ನ ತರಬೇತಿ ಕೇಂದ್ರಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

GTTC Recruitment 2022 : Details of Vacancies

ಹುದ್ದೆ : ಪ್ರಾಂಶುಪಾಲರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕೋಲಾರ, ತುಮಕೂರು, ಚಿತ್ರದುರ್ಗದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಎಐಸಿಟಿಇ ಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಟೂಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಸಮಾನಾಂತರವಾದ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅನುಭವ : ಎಐಸಿಟಿಇಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ಇಂಜಿನಿಯರಿಂಗ್ ಕಾಲೇಜು/ ಕೇಂದ್ರಗಳಲ್ಲಿ 5 ವರ್ಷಗಳ ಬೋಧನಾ ಅನುಭವ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, ಗರಿಷ್ಠ 63 ವರ್ಷ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಆಯ್ಕೆಯ ಪ್ರಕ್ರಿಯೆ : ನಿಗಧಿತ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕೆಲಸದ ಅನುಭವದ ಅರ್ಹತಾ ಮಾನದಂಡವನ್ನು ಪೂರೈಸುವ ಅಭ್ಯರ್ಥಿಗಳನ್ನು 100 ಅಂಕಗಳುಳ್ಳ ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ, ತಾಂತ್ರಿಕ ಸಂದರ್ಶನಕ್ಕೆ ಅರ್ಹರಾಗುವ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ, ಅವರುಗಳನ್ನು ತಾಂತ್ರಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

ಹುದ್ದೆಯ ವಿಧ : ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು. ಗುತ್ತಿಗೆ ಅವಧಿಯು ಒಂದು ವರ್ಷದ್ದಾಗಿರುತ್ತದೆ. ವ್ಯಕ್ತಿಯ ಕಾರ್ಯಕ್ಷಮತೆಯ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ 3 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಟಿಟಿಸಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ರಾಜಾಜಿನಗರ, ಕೈಗಾರಿಕಾ ವಸಾಹತು, ಬೆಂಗಳೂರು – 560010

ನಿಗಧಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 23, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 22, 2022
ಲಿಖಿತ ಪರೀಕ್ಷೆಯ ದಿನಾಂಕ : ಸೆಪ್ಟೆಂಬರ್ 22, 2022

GTTC Recruitment 2022 : Important Links

Notification Click Here
Application FormClick Here

ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು-ಆಡಳಿತ, ದೂರವಾಣಿ ಸಂಖ್ಯೆ : 080-23384303, ಉಪ ವ್ಯವಸ್ಥಾಪಕರು-ತರಬೇತಿ 080-23385386 ಇವರನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment