Hassan Ayush Department Recruitment 2024 : ಹಾಸನ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ತಜ್ಞವೈದ್ಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Hassan Ayush Department Recruitment 2024 : Details of Vacancies
ಹುದ್ದೆ : ತಜ್ಞ ವೈದ್ಯರು (ಆಯುರ್ವೇದ), ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ), ಔಷಧಿ ವಿತರಕರು, ಮಸಾಜಿಸ್ಟ್, ಮಲ್ಲಿಪರ್ಪಸ್ ವರ್ಕರ್, ಸಮುದಾಯ ಆರೋಗ್ಯ ಅಧಿಕಾರಿ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 14 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ತಜ್ಞ ವೈದ್ಯರು (ಆಯುರ್ವೇದ) | 1 | 57,550 |
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) | 1 | 57,550 |
ಔಷಧಿ ವಿತರಕರು | 6 | 27,550 |
ಮಸಾಜಿಸ್ಟ್ | 2 | 18,500 |
ಮಲ್ಲಿಪರ್ಪಸ್ ವರ್ಕರ್ | 1 | 16,900 |
ಸಮುದಾಯ ಆರೋಗ್ಯ ಅಧಿಕಾರಿ | 3 | 40,000 |
ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು (ಆಯುರ್ವೇದ) – ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಎ.ಎಂ.ಎಸ್ ಪದವಿ, ಎಂ.ಎಸ್ ಇನ್ ಶಲ್ಯತಂತ್ರ/ ಎಂ.ಡಿ ಇನ್ ಪಂಚಕರ್ಮ/ ಕಾಯಚಿಕಿತ್ಸಾ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) – ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಎನ್.ವೈ.ಎಸ್ ಪದವಿ, ಎಂ.ಎಸ್/ ಎಂ.ಡಿ ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
ಔಷಧಿ ವಿತರಕರು – ಬಿ-ಫಾರ್ಮ ಪದವಿ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಮಸಾಜಿಸ್ಟ್ – ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2024
ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10 ನೇ ತರಗತಿ ಹೊಂದಿರಬೇಕು. ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 1 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಸಮುದಾಯ ಆರೋಗ್ಯ ಅಧಿಕಾರಿ – ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (ಬಿ.ಎ.ಎಂ.ಎಸ್)/ ಯುನಾನಿ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (ಬಿ.ಯು.ಎಂ.ಎಸ್).
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಪಡೆದಿರುವ ಎಲ್ಲಾ ಪರೀಕ್ಷೆಗಳ ಅಂಕಗಳನ್ನು ಒಟ್ಟುಗೂಡಿಸಿ ಶೇಕಡಾವಾರು ಅಂಕಗಳಿಗೆ ಲೆಕ್ಕ ಮಾಡಿ ಮೆರಿಟ್ ಹಾಗೂ ಮೀಸಲಾತಿಯನ್ವಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹೊಸಲೈನ್ ರಸ್ತೆ, ಹಾಸನ – 573201
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 29, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 28, 2024
Hassan Ayush Department Recruitment 2024 : Important Links
NOTIFICATION | CLICK HERE |
APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.