ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Hassan District Court Recruitment 2026

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 - Hassan District Court Recruitment 2026

Hassan District Court Recruitment 2026 : ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Hassan District Court Recruitment 2026 : Details of Vacancies

ಹುದ್ದೆ :

ಸೇವಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026

ವಯೋಮಾನ (ದಿನಾಂಕ 17/09/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು.
  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಟ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1 : 10 ರ ಅನುಪಾತದಲ್ಲಿ) ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಮತ್ತು ಇತರೆ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು – ರೂ. 200
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 19, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 17, 2026

Hassan District Court Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment