Haveri Ayush Department Recruitment 2021 : ಹಾವೇರಿ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಅಗತ್ಯವಿರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Haveri Ayush Department Recruitment 2021 : Details of Vacancies
ಹುದ್ದೆ : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಆಯುಷ್ ಕಛೇರಿ ಹಾವೇರಿಯಲ್ಲಿ ಕರ್ತವ್ಯ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು
ವಯೋಮಾನ : ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳಿಗೆ ದಿನಾಂಕ 15/05/2021ಕ್ಕೆ ಒಳಗೊಂಡಂತೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : Gadag Zilla Panchayat Recruitment 2021 : ಸ್ಪೆಷಲಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹಾವೇರಿ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ,
ಜಿಲ್ಲಾಡಳಿತ ಭವನ, ಎ ಬ್ಲಾಕ್, 2ನೇ ಮಹಡಿ 8ಬಿ, ದೇವಗಿರಿ, ಹಾವೇರಿ ~ 581110
ಅರ್ಜಿ ಶುಲ್ಕ : ಅಭ್ಯರ್ಥಿಗಳು ಕಛೇರಿಗೆ ರೂ. 200 ಶುಲ್ಕ ಪಾವತಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 29, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2021
ಕಛೇರಿಯಿಂದ ಅರ್ಜಿ ನಮೂನೆ ಪಡೆದುಕೊಳ್ಳಲು ಕೊನೆಯ ದಿನಾಂಕ : ಮೇ 15, 2021
Haveri Ayush Department Recruitment 2021 : Important Links
ಅಧಿಸೂಚನೆ : Click Here
ಹೆಚ್ಚಿನ ಮಾಹಿತಿಗಾಗಿ 08375 249109ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.