ಹಾವೇರಿ ಜಿಲ್ಲೆಯ ನಗರಸಭೆಗಳಲ್ಲಿ ನೇಮಕಾತಿ 2026 – Haveri City Municipal Council Recruitment 2026

Haveri City Municipal Council Recruitment 2026

Haveri City Municipal Council Recruitment 2026 : ಹಾವೇರಿ ಜಿಲ್ಲೆಯ ನಗರಸಭೆಗಳಲ್ಲಿ ಖಾಲಿ ಇರುವ ನೇರಪಾವತಿ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chitradurga City Corporation Recruitment 2024 : Details of Vacancies

ಹುದ್ದೆ :

ನೇರಪಾವತಿ ಪೌರಕಾರ್ಮಿಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 73 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಹೆಸರುಹುದ್ದೆಗಳ ಸಂಖ್ಯೆ
ನಗರಸಭೆ ಹಾವೇರಿ 40
ನಗರಸಭೆ ರಾಣೇಬೆನ್ನೂರು 33

ಅರ್ಹತೆಗಳು :

ಈ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಹಾವೇರಿ ಜಿಲ್ಲೆಯ ಹಾವೇರಿ ಮತ್ತು ರಾಣೇಬೆನ್ನೂರು ನಗರಸಭೆಯಲ್ಲಿ ಈ ಹಿಂದೆ ಹೊರಗುತ್ತಿಗೆ/ ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ/ ಲೋಡರ್ಸ್/ ಯು.ಜಿ.ಡಿ ಹೆಲ್ಫರ್ಸ್/ ಕ್ಲೀನರ್ಸ್ ಹಾಗೂ ಹೆಲ್ಫರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಉದ್ಯೋಗ ಮಾಹಿತಿ : ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026

ವಯೋಮಾನ :

ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 50 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ಹಾವೇರಿ ಮತ್ತು ರಾಣೇಬೆನ್ನೂರು ನಗರಸಭೆಗಳಲ್ಲಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಹಾವೇರಿ ರವರ ಹೆಸರಿನಲ್ಲಿ ನಗರಸಭೆ ಹಾವೇರಿ ಮತ್ತು ನಗರಸಭೆ ರಾಣೇಬೆನ್ನೂರು ಪೌರಾಯುಕ್ತರ ಮೂಲಕ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2026

Haveri City Municipal Council Recruitment 2026 : Important Links

SHORT NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment