Haveri Gram Panchayat Library Recruitment 2022 : ಹಾವೇರಿ ಜಿಲ್ಲೆಯ ಕನಕಾಪುರ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Haveri Gram Panchayat Library Recruitment 2022 : Details of Vacancies
ಹುದ್ದೆ : ಗ್ರಂಥಾಲಯ ಸಹಾಯಕ (ಮೇಲ್ವಿಚಾರಕರು)
ಕರ್ತವ್ಯ ಸ್ಥಳ : ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕನಕಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಯೋಮಾನ : ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಒಕ್ಕೂಟದಲ್ಲಿ ನೇಮಕಾತಿ 2022
ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಹಾವೇರಿ ತಾಲ್ಲೂಕಿನ ಕನಕಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಇತ್ತೀಚಿನ ಭಾವಚಿತ್ರ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಮಾಹಿತಿ : ಈ ಹುದ್ದೆಯು ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದು, ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022
Haveri Gram Panchayat Library Recruitment 2022 : Important Links
ಅಧಿಸೂಚನೆ : Click Here
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಹಾವೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08375-236022
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
3 thoughts on “Haveri Gram Panchayat Library Recruitment 2022 – Apply for Various Supervisor Post”
How to apply here can u send application link
Offline
Good