Haveri Zilla Panchayat Recruitment 2021 : ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Haveri Zilla Panchayat Recruitment 2021 : ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Haveri Zilla Panchayat Recruitment 2021 : Details of Vacancies

ಹುದ್ದೆ : ಗ್ರಾಮ ಕಾಯಕ ಮಿತ್ರ (ಮಹಿಳೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಹಾವೇರಿ ಜಿಲ್ಲೆಯ ಒಟ್ಟು 79 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಓದು, ಬರಹ ಚೆನ್ನಾಗಿ ತಿಳಿದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ. 5000 ಪ್ರೋತ್ಸಾಹಧನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : KSP Police Constable Recruitment 2021 : 4000 ಪೊಲೀಸ್ ಕಾನ್ಸ್‌ಟೇಬಲ್‌ (ಸಿವಿಲ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 24, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 15, 2021

Haveri Zilla Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿಯಿರುವ ಹಾವೇರಿ ಜಿಲ್ಲೆಯ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಿ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.