HESCOM Recruitment 2021 : 149 ಮೈಕ್ರೋ ಫೀಡರ್ ಫ್ರಾಂಚೈಸಿ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

HESCOM Recruitment 2021 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅಗತ್ಯವಿರುವ ಮೈಕ್ರೋ ಫೀಡರ್ ಫ್ರಾಂಚೈಸಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

HESCOM Recruitment 2021 : Details of Vacancies

ಹುದ್ದೆ : ಮೈಕ್ರೋ ಫೀಡರ್ ಫ್ರಾಂಚೈಸಿ

ಕರ್ತವ್ಯ ಸ್ಥಳ : ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಹಾವೇರಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 149 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ದಿನಾಂಕ 16 ಆಗಸ್ಟ್ 2021ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಪ್ರತಿ ತಿಂಗಳಿಗೆ ಗ್ರಾಹಕರ ಮಾಪಕಗಳನ್ನು ಓದಿ ಶೇಕಡ ನೂರರಷ್ಟು ಬಿಲ್ ವಿತರಣೆ ಮಾಡಿ, ಹುವಿಸಕಂನಿಯು ನಿಗದಿಪಡಿಸಿರುವ ಮಾಸಿಕ ಮೂಲ ಗುರಿಯನ್ನು ಸಾಧಿಸಿದಲ್ಲಿ ರೂ. 12,000 ಕನಿಷ್ಠ ಪ್ರೋತ್ಸಾಹ ಧನವಾಗಿ ನೀಡಲಾಗುವುದು.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಗರಿಷ್ಠ ಅಂಕಗಳನ್ವಯ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : 769 ಅಂಗನವಾಡಿ ಟೀಚರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ನೋಂದಾಯಿತ ಅಂಚೆ ಮೂಲಕ/ ಸ್ಪೀಡ್ ಪೋಸ್ಟ್ ಮೂಲಕ/ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಆಯಾ ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ವಿಳಾಸವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಆಯಾ ವೃತ್ತದ ಹೆಸರಿನಲ್ಲಿ ರೂ. 295 ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ. ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 31, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 16, 2021
ಮೂಲ ದಾಖಲಾತಿ ಪರಿಶೀಲನೆ ದಿನಾಂಕ : ಆಗಸ್ಟ್ 19, 2021

HESCOM Recruitment 2021 : Important Links

(ಶಿರಸಿ) ಅಧಿಸೂಚನೆ & ಅರ್ಜಿ ನಮೂನೆ : Click Here
(ಹುಬ್ಬಳ್ಳಿ) ಅಧಿಸೂಚನೆ & ಅರ್ಜಿ ನಮೂನೆ : Click Here
(ಬೆಳಗಾವಿ) ಅಧಿಸೂಚನೆ & ಅರ್ಜಿ ನಮೂನೆ : Click Here

(ವಿಜಯಪುರ) ಅಧಿಸೂಚನೆ & ಅರ್ಜಿ ನಮೂನೆ : Click Here
(ಚಿಕ್ಕೋಡಿ) ಅಧಿಸೂಚನೆ & ಅರ್ಜಿ ನಮೂನೆ : Click Here

(ಬಾಗಲಕೋಟೆ) ಅಧಿಸೂಚನೆ & ಅರ್ಜಿ ನಮೂನೆ : Click Here
(ಹಾವೇರಿ) ಅಧಿಸೂಚನೆ & ಅರ್ಜಿ ನಮೂನೆ : Click Here

ಇತರೆ ಮಾಹಿತಿ : ಮೈಕ್ರೋ ಫೀಡರ್ ಫ್ರಾಂಚೈಸಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಂಬಂಧಿಸಿದ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ವಾಸಸ್ಥಳದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಗ್ರಾಮಪಂಚಾಯಿತಿಯ ಅಧಿಕೃತ ಅಧಿಕಾರಿಯಿಂದ ಪಡೆದಿರಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.