ಐಬಿಪಿಎಸ್‌ನಿಂದ ಕ್ಲರ್ಕ್‌ ಹುದ್ದೆಗಳ ನೇಮಕಾತಿ 2024 – IBPS Clerk Recruitment 2024

IBPS Clerk Recruitment 2024 : ಬ್ಯಾಂಕಿನ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಕ್ಲರ್ಕ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IBPS Clerk Recruitment 2024 : Details of Vacancies

ಹುದ್ದೆ : ಕ್ಲರ್ಕ್‌

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 6128 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 457 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಎಂಟಿಎಸ್ ಹುದ್ದೆಗಳ ನೇಮಕಾತಿ 2024

ವಯೋಮಾನ : ದಿನಾಂಕ 01/07/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು : ಪ್ರಿಲಿಮಿನರಿ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಕೇಂದ್ರಗಳಲ್ಲಿ ನಡೆಸಲಾಗುವುದು. ಮುಖ್ಯ ಪರೀಕ್ಷೆಯನ್ನು ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಕಲಬುರಗಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 21, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 21, 2024
ಪ್ರಿಲಿಮಿನರಿ ಪರೀಕ್ಷೆ : ಆಗಸ್ಟ್, 2024
ಮುಖ್ಯ ಪರೀಕ್ಷೆ : ಅಕ್ಟೋಬರ್, 2024

IBPS Clerk Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment