IBPS PO Recruitment 2022 – Apply Online for 6432 Posts

IBPS PO Recruitment 2022 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IBPS PO Recruitment 2022 : Details of Vacancies

ಹುದ್ದೆ : ಪ್ರೊಬೇಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 6432 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ದಿನಾಂಕ 01/08/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 175, ಉಳಿದ ಅಭ್ಯರ್ಥಿಗಳು ರೂ. 850 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 22, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 22, 2022

IBPS PO Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment