IBPS SO Recruitment 2022 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IBPS SO Recruitment 2022 : Details of Vacancies
ಹುದ್ದೆ : ಐಟಿ ಆಫೀಸರ್ (ಸ್ಕೇಲ್ – 1), ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ (ಸ್ಕೇಲ್-1), ರಾಜ್ಯಭಾಷಾ ಅಧಿಕಾರಿ (ಸ್ಕೇಲ್-1), ಕಾನೂನು ಅಧಿಕಾರಿ (ಸ್ಕೇಲ್-1), HR/ಪರ್ಸೊನೆಲ್ ಆಫೀಸರ್ (ಸ್ಕೇಲ್-1), ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 710 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಐಟಿ ಆಫೀಸರ್ (ಸ್ಕೇಲ್ – 1) | 44 |
ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ (ಸ್ಕೇಲ್-1) | 516 |
ರಾಜ್ಯಭಾಷಾ ಅಧಿಕಾರಿ (ಸ್ಕೇಲ್-1) | 25 |
ಕಾನೂನು ಅಧಿಕಾರಿ (ಸ್ಕೇಲ್-1) | 10 |
HR/ಪರ್ಸೊನೆಲ್ ಆಫೀಸರ್ (ಸ್ಕೇಲ್-1) | 15 |
ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1) | 100 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ದಿನಾಂಕ 01/11/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ 2022
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 21, 2022
IBPS SO Recruitment 2022 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.