ICAR IARI Recruitment 2021 – Apply Online for 641 Technician Post

ICAR IARI Recruitment 2021 : ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ICAR IARI Recruitment 2021 : Details of Vacancies

ಹುದ್ದೆ : ಟೆಕ್ನೀಷಿಯನ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 641 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ/ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (ಆನ್‌ಲೈನ್‌) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಲ್ಲಿ ನೇಮಕಾತಿ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 1,000
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 300

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 18, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 10, 2022 ಜನವರಿ 20, 2022
ಆನ್‌ಲೈನ್‌ ಪರೀಕ್ಷೆ ದಿನಾಂಕ : ಜನವರಿ 25, 2022 ರಿಂದ ಫೆಬ್ರವರಿ 05, 2022 ವರೆಗೆ

ICAR IARI Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಇತರೆ ಮಾಹಿತಿ : ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಗರಿಷ್ಠ 5 ಸಿಟಿಗಳನ್ನು ಪರೀಕ್ಷೆ ಕೇಂದ್ರಗಳಾಗಿ ಆಯ್ಕೆ ಮಾಡಿಕೊಳ್ಳಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment