IDBI Bank Recruitment 2021 : 920 ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

IDBI Bank Recruitment 2021 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Recruitment 2021 : Details of Vacancies

ಹುದ್ದೆ : ಕಾರ್ಯನಿರ್ವಾಹಕ (ಎಕ್ಸಿಕ್ಯೂಟಿವ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 920 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಶೇಕಡಾ 55% ಅಂಕಗಳೊಂದಿಗೆ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲನೇ ವರ್ಷ ಮಾಸಿಕ ರೂ. 29,000, ಎರಡನೇ ವರ್ಷ ಮಾಸಿಕ ರೂ. 31,000 ಹಾಗೂ ಮೂರನೇ ವರ್ಷ ಮಾಸಿಕ ರೂ. 34,000 ವೇತನ ನೀಡಲಾಗುತ್ತದೆ.

ಐಡಿಬಿಐ ಬ್ಯಾಂಕಿನಲ್ಲಿ ಖಾಲಿಯಿರುವ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 200, ಉಳಿದ ಅಭ್ಯರ್ಥಿಗಳು ರೂ. 1,000 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 04, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 18, 2021
ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಸೆಪ್ಟೆಂಬರ್ 05, 2021

IDBI Bank Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.