ಐಡಿಬಿಐ ಬ್ಯಾಂಕ್ ನೇಮಕಾತಿ 2023 – IDBI Bank Recruitment 2023 Apply Online at idbibank.in

IDBI Bank Recruitment 2023 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Recruitment 2023 : Details of Vacancies

ಹುದ್ದೆ : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”), ಎಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2100 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”)800
ಎಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್)1300

ಶೈಕ್ಷಣಿಕ ಅರ್ಹತೆ :
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) – ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ಶೇಕಡಾ 60% ಅಂಕಗಳೊಂದಿಗೆ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶೇಕಡಾ 55% ಅಂಕ ನಿಗದಿಪಡಿಸಲಾಗಿದೆ.

ಎಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್) – ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಎಸ್‌ಬಿಐ ಸಿಬಿಓ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಎಕ್ಸಿಕ್ಯೂಟಿವ್ ಹುದ್ದೆಗೆ ಸಂದರ್ಶನ ಇರುವುದಿಲ್ಲ)

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
•ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 200
• ಉಳಿದ ಅಭ್ಯರ್ಥಿಗಳು – ರೂ. 1,000

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 22, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 06, 2023
(ತಾತ್ಕಾಲಿಕ) ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಡಿಸೆಂಬರ್ 30 & 31, 2023

IDBI Bank Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment