ಐಡಿಬಿಐ ಬ್ಯಾಂಕ್ ನೇಮಕಾತಿ 2023 – IDBI Bank Recruitment 2023 Apply Online at idbibank.in

IDBI Bank Recruitment 2023 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Recruitment 2023 : Details of Vacancies

ಹುದ್ದೆ : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ “ಓ”)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 600 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

IDBI Bank Recruitment

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023

ವಯೋಮಾನ : ದಿನಾಂಕ 31/08/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 200
• ಉಳಿದ ಅಭ್ಯರ್ಥಿಗಳು – ರೂ. 1,000

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 15, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2023
(ತಾತ್ಕಾಲಿಕ) ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಅಕ್ಟೋಬರ್ 20, 2023

IDBI Bank Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment