Indian Air Force Recruitment 2021 : 1524 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Air Force Recruitment 2021 : ಭಾರತೀಯ ವಾಯುಪಡೆಯಲ್ಲಿ ಅಗತ್ಯವಿರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Air Force Recruitment 2021 : Details of Vacancies

ಹುದ್ದೆ : ಸೀನಿಯರ್ ಕಂಪ್ಯೂಟರ್ ಆಪರೇಟರ್, ಸ್ಟೆನೋಗ್ರಾಫರ್, ಎಲ್‌ಡಿಸಿ, ಹಿಂದಿ ಟೈಪಿಸ್ಟ್‌, ಸ್ಟೋರ್ ಕೀಪರ್, ಕಾರ್ಪೆಂಟರ್, ಪೇಂಟರ್, ಮೆಸ್ ಸ್ಟಾಫ್‌, ಕುಕ್, ಡ್ರೈವರ್, ಟೈಲರ್, ಲಾಂಡ್ರಿಮೆನ್, ಫೈಯರ್‌ಮನ್, ಟರ್ನರ್, ವೈರ್‌ಲೆಸ್‌ ಆಪರೇಟರ್, ಫೈಯರ್ ಇಂಜಿನ್ ಡ್ರೈವರ್, ಫಿಟ್ಟರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌, ಲೆದರ್ ವರ್ಕರ್, ಎಂಟಿಎಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1524 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪಿಯುಸಿ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಉದ್ಯೋಗ ಮಾಹಿತಿ : KVG Bank Recruitment 2021 : ಆರ್ಥಿಕ ಸಲಹೆಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಆಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 03, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 03, 2021

Indian Air Force Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here
ವೆಬ್‌ಸೈಟ್ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.