Indian Coast Guard Recruitment 2021 | 350 ನಾವಿಕ, ಯಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Coast Guard Recruitment 2021 : ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Coast Guard Recruitment 2021 : Details of Vacancies

ಹುದ್ದೆ : ನಾವಿಕ (ಜನರಲ್ ಡ್ಯೂಟಿ), ನಾವಿಕ (ಡೊಮೆಸ್ಟಿಕ್ ಬ್ರಾಂಚ್), ಯಾಂತ್ರಿಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 350 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ನಾವಿಕ (ಜನರಲ್ ಡ್ಯೂಟಿ)260
ನಾವಿಕ (ಡೊಮೆಸ್ಟಿಕ್ ಬ್ರಾಂಚ್)50
ಯಾಂತ್ರಿಕ (ಮೆಕ್ಯಾನಿಕಲ್)20
ಯಾಂತ್ರಿಕ (ಇಲೆಕ್ಟ್ರಿಕಲ್)13
ಯಾಂತ್ರಿಕ (ಇಲೆಕ್ಟ್ರಾನಿಕ್ಸ್)07

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ನಾವಿಕ (ಜನರಲ್ ಡ್ಯೂಟಿ) ಹುದ್ದೆಗೆ ಗಣಿತ ಹಾಗೂ ಭೌತಶಾಸ್ತ್ರ ವಿಷಯದಲ್ಲಿ ದ್ವಿತೀಯ ಪಿಯುಸಿ ಹೊಂದಿರಬೇಕು.
• ನಾವಿಕ (ಡೊಮೆಸ್ಟಿಕ್ ಬ್ರಾಂಚ್) ಹುದ್ದೆಗೆ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಯಾಂತ್ರಿಕ ಹುದ್ದೆಗೆ 10ನೇ ತರಗತಿ ಮತ್ತು ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆ ನೇಮಕಾತಿ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 29,200 ವರೆಗೂ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 250 ಪಾವತಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 02, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 16, 2021

Indian Coast Guard Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here (ಜುಲೈ 02 ರಿಂದ ಅರ್ಜಿ ಸಲ್ಲಿಸಿ)

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook