Indian Navy Recruitment 2022 : ಭಾರತೀಯ ನೌಕಾಪಡೆಯಿಂದ ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Indian Navy Recruitment 2022 : Details of Vacancies
ಹುದ್ದೆ : ಅಗ್ನಿವೀರ (ಎಸ್.ಎಸ್.ಆರ್), ಅಗ್ನಿವೀರ (ಎಂ.ಆರ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1500 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಅಗ್ನಿವೀರ (ಎಸ್.ಎಸ್.ಆರ್) | 1400 |
ಅಗ್ನಿವೀರ (ಎಂ.ಆರ್) | 100 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಗ್ನಿವೀರ (ಎಸ್.ಎಸ್.ಆರ್) – ಗಣಿತ ಮತ್ತು ಭೌತಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಅರ್ಹತೆ ಮತ್ತು ರಸಾಯನಶಾಸ್ತ್ರ/ ಜೀವಶಾಸ್ತ್ರ/ ಕಂಪ್ಯೂಟರ್ ಸೈನ್ಸ್ ಇವುಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಅಧ್ಯಯನ ಮಾಡಿರಬೇಕು.
• ಅಗ್ನಿವೀರ (ಎಂ.ಆರ್) – ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್/ ಟ್ರೇಡ್ಸ್‌ಮನ್ ಹುದ್ದೆಗಳ ನೇಮಕಾತಿ 2022
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2002 ಮೇ 1 ಮತ್ತು 2005 ಅಕ್ಟೋಬರ್ 31ರ ನಡುವೆ ಜನಿಸಿರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಶಾರ್ಟ್‌ಲಿಸ್ಟಿಂಗ್ (ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ), ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಕನಿಷ್ಠ ಎತ್ತರ :
• ಪುರುಷ – 157 ಸೆಂ. ಮೀ.
• ಮಹಿಳೆ – 152 ಸೆಂ. ಮೀ.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 550 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, UPI ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 08, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 17, 2022
Indian Navy Recruitment 2022 : Important Links
NOTIFICATION (SSR) | CLICK HERE |
NOTIFICATION (MR) | CLICK HERE |
APPLY ONLINE | CLICK HERE (ಡಿಸೆಂಬರ್ 08 ರಿಂದ) |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.