ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 – Indian Overseas Bank Apprentice Recruitment 2024

Indian Overseas Bank Apprentice Recruitment 2024 : ಇಂಡಿಯನ್ ಓವರ್ಸೀಸ್ ಬ್ಯಾಂಕಿನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Overseas Bank Apprentice Recruitment 2024 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 550 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 50 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2024

ವಯೋಮಾನ : ದಿನಾಂಕ 01/08/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಭಾಷಾ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸ್ಟೈಫಂಡ್ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ರಿಂದ ರೂ. 15,000 ಸ್ಟೈಫಂಡ್ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಉತ್ತರ ರೈಲ್ವೆ ಅಪ್ರೆಂಟಿಸ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 944
• ಮಹಿಳಾ, ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು – ರೂ. 708
• ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 472

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 28, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2024
ಆನ್‌ಲೈನ್‌ ಪರೀಕ್ಷೆ (ತಾತ್ಕಾಲಿಕ) : ಸೆಪ್ಟೆಂಬರ್ 22, 2024

Indian Overseas Bank Apprentice Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment