ISRO Recruitment 2022-23 – Apply Online for 526 Assistant, Junior Personal Assistant, UDC, Stenographer Posts

ISRO Recruitment 2022-23 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್, ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ISRO Recruitment 2022-23 : Details of Vacancies

ಹುದ್ದೆ : ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್‌, ಸ್ಟೆನೋಗ್ರಾಫರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 526 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಬೆಂಗಳೂರು ಇಸ್ರೋ ಘಟಕದಲ್ಲಿ 215 ಹುದ್ದೆಗಳು ಖಾಲಿ ಇದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್339
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್153
ಅಪ್ಪರ್ ಡಿವಿಷನ್ ಕ್ಲರ್ಕ್‌16
ಸ್ಟೆನೋಗ್ರಾಫರ್14
ಅಸಿಸ್ಟೆಂಟ್ (ಸ್ಪೇಸ್)3
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಸ್ಪೇಸ್)1

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್‌ – ಕನಿಷ್ಠ ಶೇಕಡಾ 60 ರಷ್ಟು ಅಂಕಗಳೊಂದಿಗೆ ಪದವಿ ಪಾಸ್ ಆಗಿರಬೇಕು ಜೊತೆಗೆ ಕಂಪ್ಯೂಟರ್ ಬಳಕೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

• ಜೂನಿಯರ್ ಪರ್ಸನಲ್ ಅಸಿಸ್ಟೆಂಟ್/ ಸ್ಟೆನೋಗ್ರಾಫರ್ – ಕನಿಷ್ಠ ಶೇಕಡಾ 60 ರಷ್ಟು ಅಂಕಗಳೊಂದಿಗೆ ಪದವಿ ಪಾಸ್ ಅಥವಾ ಕನಿಷ್ಠ ಶೇಕಡಾ 60 ರಷ್ಟು ಅಂಕಗಳೊಂದಿಗೆ ಡಿಪ್ಲೊಮಾ ಇನ್ ಕಮರ್ಷಿಯಲ್/ ಸೆಕ್ರೆಟರಿಯಲ್ ಪ್ರಾಕ್ಟಿಸ್ ಅರ್ಹತೆ ಹೊಂದಿರಬೇಕು. 1 ವರ್ಷದ ಸ್ಟೆನೋ ಟೈಪಿಸ್ಟ್/ ಸ್ಟೆನೋಗ್ರಾಫರ್ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ವಯೋಮಾನ : ದಿನಾಂಕ 09/01/2023ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೀರಿರಬಾರದು.
• ಒಬಿಸಿ ಅಭ್ಯರ್ಥಿಗಳಿಗೆ – ಗರಿಷ್ಠ 31 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ

ಉದ್ಯೋಗ ಮಾಹಿತಿ : ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಂತೆ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ (ಅಗತ್ಯವಿರುವ ಹುದ್ದೆಗೆ) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆಯು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಸಂಸ್ಥೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 20, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 09, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 11, 2023

ISRO Recruitment 2022-23 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment