ITBP Recruitment 2022 – Apply Online for 287 Constable/Tradesmen Posts

ITBP Recruitment 2022 : ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ITBP Recruitment 2022 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್, ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 287 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಾನ್ಸ್‌ಟೇಬಲ್‌ (ಟೈಲರ್)18
ಕಾನ್ಸ್‌ಟೇಬಲ್‌ (ಗಾರ್ಡನರ್)16
ಕಾನ್ಸ್‌ಟೇಬಲ್‌ (ಕೊಬ್ಲೇರ್)31
ಕಾನ್ಸ್‌ಟೇಬಲ್‌ (ಸಫಾಯ್ ಕರ್ಮಚಾರಿ)78
ಕಾನ್ಸ್‌ಟೇಬಲ್‌ (ವಾಶರ್ ಮ್ಯಾನ್)89
ಕಾನ್ಸ್‌ಟೇಬಲ್‌ (ಬಾರ್ಬರ್)55

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್) – 10ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ನಲ್ಲಿ ಎರಡು ವರ್ಷ ಕೆಲಸದ ಅನುಭವ ಹೊಂದಿರಬೇಕು. ಅಥವಾ ಐಟಿಐ ಅರ್ಹತೆ ಜೊತೆಗೆ ಕೆಲಸದ ಅನುಭವ ಹೊಂದಿರಬೇಕು.
• ಕಾನ್ಸ್‌ಟೇಬಲ್‌ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕ್ಲರ್ಕ್, ಸಹಾಯಕ, ಎಂಟಿಎಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ :
• ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ
• ಕಾನ್ಸ್‌ಟೇಬಲ್‌ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 23, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 22, 2022

ITBP Recruitment 2022 : Important Links

SHORT NOTIFICATION CLICK HERE
DETAIL NOTIFICATION CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment