ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ 2023 – ITBP Recruitment 2023

ITBP Recruitment 2023 : ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಡ್ರೈವರ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ITBP Recruitment 2023 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಡ್ರೈವರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 458 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Reservation StatusTotal Vacancies
UR195
SC74
ST37
OBC110
EWS42

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೃಹತ್ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 – ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಸ್ಕಿಲ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 27, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 26, 2023 ಆಗಸ್ಟ್ 10, 2023

ITBP Recruitment 2023 : Important Links

DETAIL NOTIFICATION CLICK HERE
SHORT NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment