Janatha Seva Cooperative Bank Recruitment 2021 : ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Janatha Seva Cooperative Bank Recruitment 2021 : Details of Vacancies
ಹುದ್ದೆ : ಕಿರಿಯ ಸಹಾಯಕ, ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಕಿರಿಯ ಸಹಾಯಕ | 10 |
ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ | 02 |
ಶೈಕ್ಷಣಿಕ ಅರ್ಹತೆ :
• ಕಿರಿಯ ಸಹಾಯಕ ಹುದ್ದೆಗೆ ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡ ಐಚ್ಚಿಕ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನದ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಯಾವುದಾದರೂ ಸಂಸ್ಥೆಯಲ್ಲಿ ಡಾಟಾ ಸೆಂಟರ್ ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. CNE, MCSE & CISA ಕೋರ್ಸ್ ಮಾಡಿರುವಂತಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಅರ್ಜಿಗಳನ್ನು ಪರಿಶೀಲಿಸಿದ ನಂತರ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು ಹಾಗೂ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯಲಾಗುವುದು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ನೇಮಕಾತಿ
ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ, ಪ್ರಕಟಣೆಯಲ್ಲಿ ತಿಳಿಸಿದಂತಹ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಲಿ.,
ಅಂಚೆ ಪೆಟ್ಟಿಗೆ ಸಂಖ್ಯೆ 03, ಹಂಪಿನಗರ, ಬೆಂಗಳೂರು – 560104
ನಿಗದಿತ ಅರ್ಜಿ ಶುಲ್ಕದ ವಿವರ : ಭರ್ತಿಗೊಳಸಿದ ಅರ್ಜಿಯ ಜೊತೆಯಲ್ಲಿ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅರ್ಹ ಅಭ್ಯರ್ಥಿಗಳು ರೂ. 1,000 ಹಾಗೂ ಪ.ಜಾತಿ, ಪ.ಪಂ., ಹಿಂದುಳಿದ ವರ್ಗ – 01ರ ಅಭ್ಯರ್ಥಿಗಳು ರೂ. 500 ಮೌಲ್ಯದ ಡಿಡಿ/ಪೇ ಆರ್ಡರ್ ಅನ್ನು CEO Janatha Seva Cooperative Bank Ltd, Bangaluru ಇವರ ಹೆಸರಿನಲ್ಲಿ ಪಡೆದು ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 16, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2021
Janatha Seva Cooperative Bank Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
I want job requirement