
Kalaburagi District Court Recruitment 2026 : ಕಲಬುರಗಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರ, ವಾಹನ ಚಾಲಕ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Kalaburagi District Court Recruitment 2026 : Details of Vacancies
ಹುದ್ದೆ :
ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರ, ವಾಹನ ಚಾಲಕ, ಆದೇಶ ಜಾರಿಕಾರ ಹಾಗೂ ಜವಾನ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 47 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ | ಮಿಕ್ಕುಳಿದ ವೃಂದ |
| ಶೀಘ್ರಲಿಪಿಗಾರರು ಗ್ರೇಡ್ 3 | 5 | 1 |
| ಬೆರಳಚ್ಚುಗಾರರು | 10 | 2 |
| ಬೆರಳಚ್ಚು ನಕಲುಗಾರ | 3 | – |
| ವಾಹನ ಚಾಲಕ | – | 1 |
| ಆದೇಶ ಜಾರಿಕಾರ | 6 | |
| ಜವಾನ | 15 | 4 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 –
- ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು –
- ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರ –
- ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ – ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಲಕ –
- 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ.
- ಭಾರೀ ವಾಹನ ಚಾಲನೆಯ ರಹದಾರಿಯನ್ನು ಹೊಂದಿರಬೇಕು.
ಆದೇಶ ಜಾರಿಕಾರ –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಲಘು ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕನ್ನಡ ಓದಲು, ಬರೆಯಲು ಬರಬೇಕು.
ವಯೋಮಾನ (ದಿನಾಂಕ 15/12/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷ
- ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷ
ವೇತನ :
| ಹುದ್ದೆ | ವೇತನ |
| ಶೀಘ್ರಲಿಪಿಗಾರರು ಗ್ರೇಡ್ 3 | ರೂ. 44,425 – ರೂ. 83,700 |
| ಬೆರಳಚ್ಚುಗಾರರು | ರೂ. 34,100 – ರೂ. 67,600 |
| ಬೆರಳಚ್ಚು ನಕಲುಗಾರ | ರೂ. 34,100 – ರೂ. 67,600 |
| ವಾಹನ ಚಾಲಕ | ರೂ. 34,100 – ರೂ. 67,600 |
| ಆದೇಶ ಜಾರಿಕಾರ | ರೂ. 31,775 – ರೂ. 61,300 |
| ಜವಾನ | ರೂ. 27,000 – ರೂ. 46,675 |
ಆಯ್ಕೆ ವಿಧಾನ :
- ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
- ವಾಹನ ಚಾಲಕರು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
- ಆದೇಶ ಜಾರಿಕಾರ, ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ – ಜಿಲ್ಲಾ ನ್ಯಾಯಾಲಯದಲ್ಲಿ ಪಿಯೋನ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
- ಪ.ಜಾತಿ, ಪ.ಪಂ, ಪ್ರ1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 16, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 15, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 17, 2026
Kalaburagi District Court Recruitment 2026 : Important Links
| NOTIFICATION & APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.