ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2023 – Kalaburagi District Gram Panchayat Recruitment 2023

Kalaburagi District Gram Panchayat Recruitment 2023 : ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kalaburagi District Gram Panchayat Recruitment 2023 : Details of Vacancies

ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Kalaburagi District Gram Panchayat Recruitment 2023

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ದಿನಾಂಕ 13/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,196 ಹಾಗೂ ಕಾರ್ಮಿಕ ಇಲಾಖೆ ಕಾಲ ಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಹಾಗೂ ಅರ್ಜಿಯ ಕವರ್ ನ ಮೇಲೆ ಗ್ರಾಮ ಪಂಚಾಯಿತಿ ಹೆಸರನ್ನು ನಮೂದಿಸಿ ಈ ಕೆಳಗಡೆ ನೀಡಲಾದ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಲಬುರಗಿ

ಅರ್ಜಿ ಶುಲ್ಕ : ಅರ್ಜಿ ನಮೂನೆಯನ್ನು ರೂ. 40 ಪಾವತಿಸಿ ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಲಬುರಗಿ ಕಛೇರಿಯಲ್ಲಿ ಪಡೆಯಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 25, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 13, 2023

Kalaburagi Gram Panchayat Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment