Kalaburagi Zilla Panchayat Recruitment 2021 : 32 ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Kalaburagi Zilla Panchayat Recruitment 2021 : ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Kalaburagi Zilla Panchayat Recruitment 2021 : Details of Vacancies

ಹುದ್ದೆ : ತಾಲೂಕು ಎಮ್.ಐ.ಎಸ್ ಸಂಯೋಜಕರು, ತಾಲೂಕು ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ತಾಲೂಕು ಎಮ್.ಐ.ಎಸ್ ಸಂಯೋಜಕರು ಹುದ್ದೆಗೆ ಬಿಸಿಎ/ಬಿಎಸ್ಸಿ ಕಂಪ್ಯೂಟರ್ ಸೈನ್ಸ್/ ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ ಅರ್ಹತೆ ಹೊಂದಿರಬೇಕು.
ತಾಲೂಕು ಐಇಸಿ ಸಂಯೋಜಕರು ಹುದ್ದೆಗೆ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ತಾಂತ್ರಿಕ ಸಹಾಯಕರು ಹುದ್ದೆಗೆ ಬಿಇ/ ಬಿಟೆಕ್ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ರಿಂದ ರೂ. 24,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : KOF Raichur Recruitment Notification 2021

ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 05, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 15, 2021

Kalaburagi Zilla Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.