Karnataka Agriculture Department Recruitment 2023 – Apply for 3 Technical Consultant Posts

Karnataka Agriculture Department Recruitment 2023 : ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Agriculture Department Recruitment 2023 : Details of Vacancies

ಹುದ್ದೆ : ತಾಂತ್ರಿಕ ಸಲಹೆಗಾರರು

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು, ಕೃಷಿ ಆಯುಕ್ತರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಕೋಶ, ಕೃಷಿ ಇಲಾಖೆ, ಬೆಂಗಳೂರು ಇವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ICAR ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ, ಕ್ಷೇತ್ರ ಮಟ್ಟದಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸೇವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ಗೌರವಧನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಕೃಷಿ ನಿರ್ದೇಶಕರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು – 01

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 03, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 20, 2023

Karnataka Agriculture Department Recruitment 2023 : Important Links

NOTIFICATION & APPLICATION FORM CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ 080-22074161 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment