ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ 2024 – Karnataka Apex Bank Recruitment 2024

Karnataka Apex Bank Recruitment 2024 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಇಲ್ಲಿ ಖಾಲಿಯಿರುವ ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Apex Bank Recruitment 2024 : Details of Vacancies

ಹುದ್ದೆ : ಬ್ಯಾಂಕ್ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 93 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
(ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ, ಪ.ಜಾತಿ/ ಪ.ಪಂ./ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,425 ರಿಂದ ರೂ. 87,125 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಜಿಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡ 85ಕ್ಕೆ ಲೆಕ್ಕಾಚಾರ ಮಾಡಲಾಗುವುದು ಹಾಗೂ ಮೌಖಿಕ ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿ ಪಡಿಸಿದೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ 2024 - Karnataka Apex Bank Recruitment 2024

ಉದ್ಯೋಗ ಮಾಹಿತಿ : ಕೆಇಎ ಯಿಂದ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ರೂ. 1000
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 07, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 06, 2024

Karnataka Apex Cooperative Bank Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment