Karnataka Bank Officers (Scale-1) Recruitment 2023 : ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ (ಸ್ಕೇಲ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Bank Officers (Scale-1) Recruitment 2023 : Details of Vacancies
ಹುದ್ದೆ : ಆಫೀಸರ್ಸ್ (ಸ್ಕೇಲ್-1)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು (ಪೋಸ್ಟ್ ಗ್ರ್ಯಾಜುಯೆಟ್ ಡಿಪ್ಲೊಮಾ/ 1 ವರ್ಷ ಎಕ್ಸಿಕ್ಯೂಟಿವ್ ಎಂಬಿಎ ಹೊರತುಪಡಿಸಿ). / ಅಗ್ರಿಕಲ್ಚರಲ್ ಸೈನ್ಸ್, ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದು. ಎಂಬಿಎ (ಮಾರ್ಕೆಟಿಂಗ್/ಫೈನಾನ್ಸ್) ಪದವೀಧರರಿಗೆ ಆದ್ಯತೆ ನೀಡಲಾಗಿದೆ.
ವಯೋಮಾನ : ದಿನಾಂಕ 01/08/2023ಕ್ಕೆ ಒಳಗೊಂಡಂತೆ ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,000 ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : 7ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ : ಆನ್ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಮಾದರಿ :
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಮುಂಬೈ, ದೆಹಲಿ, ಚೆನೈ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 700
ಉಳಿದ ಅಭ್ಯರ್ಥಿಗಳು – ರೂ. 800
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 12, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 26, 2023
ಆನ್ಲೈನ್ ಪರೀಕ್ಷೆ ನಡೆಯುವ ತಾತ್ಕಾಲಿಕ ದಿನಾಂಕ : ಸೆಪ್ಟೆಂಬರ್ 2023
Karnataka Bank Officers (Scale-1) Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.