Karnataka Bank Recruitment 2022 – Apply Online for Clerk Post

Karnataka Bank Recruitment 2022 : ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಗುಮಾಸ್ತ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka Bank Recruitment 2022 : Details of Vacancies

ಹುದ್ದೆ : ಗುಮಾಸ್ತ (ಕ್ಲರ್ಕ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ ಶೇಕಡಾ 60% ಅಂಕಗಳೊಂದಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಅಭ್ಯರ್ಥಿಯು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಯಾವುದೇ ರಾಜ್ಯ ಭಾಷೆಯಲ್ಲಿ ಮಾತನಾಡಲು ಶಕ್ತರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ದಿನಾಂಕ 01/05/2022ಕ್ಕೆ ಒಳಗೊಂಡಂತೆ ಗರಿಷ್ಠ 26 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಜೂನ್ 2022 ರಲ್ಲಿ ನಿಗದಿಪಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಮುಂಬೈ, ದೆಹಲಿ

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ನೇರ ನೇಮಕಾತಿ 2022

ಕರ್ನಾಟಕ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ‌. 600, ಉಳಿದ ಅಭ್ಯರ್ಥಿಗಳು ರೂ. 700 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 10, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2022

Karnataka Bank Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment