Karnataka City Corporation Recruitment 2023 : ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka City Corporation Recruitment 2023 : Details of Vacancies
ಹುದ್ದೆ : ಪೌರಕಾರ್ಮಿಕರು
ಕರ್ತವ್ಯ ಸ್ಥಳ : ಚಿಕ್ಕಬಳ್ಳಾಪುರ, ಹಾಸನ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 751 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆ | ಹುದ್ದೆಗಳ ಸಂಖ್ಯೆ |
ಚಿಕ್ಕಬಳ್ಳಾಪುರ | 102 |
ಹಾಸನ | 60 |
ಬಾಗಲಕೋಟೆ | 438 |
ವಿಜಯಪುರ | 151 |
ಅರ್ಹತೆಗಳು :
• ಕನ್ನಡ ಮಾತನಾಡಲು ಗೊತ್ತಿರಬೇಕು.
• ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಪೌರಕಾರ್ಮಿಕರಾಗಿ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ, ಲೋಡರ್ಸ್, ಕ್ಲೀನರ್ಸ್ ಆಧಾರದಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದೇ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಉದ್ಯೋಗ ಮಾಹಿತಿ : ಗಾರ್ಡನರ್, ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
(ಚಿಕ್ಕಬಳ್ಳಾಪುರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 11, 2023
(ಬಾಗಲಕೋಟೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 13, 2023
(ಹಾಸನ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 13, 2023
(ವಿಜಯಪುರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 14, 2023
Karnataka City Corporation Recruitment 2023 : Important Links
NOTIFICATION (Chikkballapur) | CLICK HERE |
NOTIFICATION (Hassan) | CLICK HERE |
NOTIFICATION (Bagalkot) | CLICK HERE |
NOTIFICATION (Vijayapura) | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.